Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:14 - ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:14
35 ತಿಳಿವುಗಳ ಹೋಲಿಕೆ  

ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು.


ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.


ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.


“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.


ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”


ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ.


ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.


ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿಮ್ಮ ಕೈಕೆಲಸವನ್ನು ಆಲೋಚಿಸುತ್ತೇನೆ.


ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.


ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.


ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.


ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.


ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು.


ಇಗೋ, ನನ್ನ ಪ್ರಿಯಳೇ, ನೀನು ಎಷ್ಟು ಸುಂದರಿ! ಆಹಾ, ನೀನು ಎಷ್ಟು ಸುಂದರಿಯು. ನಿನ್ನ ಮುಸುಕಿನೊಳಗಿನ ನಿನ್ನ ಕಣ್ಣುಗಳು ಪಾರಿವಾಳಗಳೇ. ನಿನ್ನ ತಲೆಕೂದಲು ಗಿಲ್ಯಾದಿನ ಪರ್ವತದಿಂದ ಇಳಿದು ಬರುವ ಮೇಕೆ ಮಂದೆಯ ಹಾಗೆ ಇದೆ.


“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.


ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.


ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ದಕ್ಷಿಣದವರು ಏಸಾವನ ಬೆಟ್ಟವನ್ನೂ ಬಯಲಿನವರು ಫಿಲಿಷ್ಟಿಯರ ದೇಶವನ್ನೂ ಸ್ವತಂತ್ರಿಸಿಕೊಳ್ಳುವರು. ಎಫ್ರಾಯೀಮಿನ ಹೊಲಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನಮಾಡಿಕೊಳ್ಳುವರು ಬೆನ್ಯಾಮೀನನು ಗಿಲ್ಯಾದನ್ನು ವಶಪಡಿಸಿಕೊಳ್ಳುವನು.


ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು. ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು. ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು. ಅವರಿಗೆ ಸ್ಥಳ ಸಾಲದೆ ಇರುವುದು.


ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು