Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:19 - ಕನ್ನಡ ಸಮಕಾಲಿಕ ಅನುವಾದ

19 ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:19
36 ತಿಳಿವುಗಳ ಹೋಲಿಕೆ  

ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ಯೆಹೋವ ದೇವರು ಹೇಳುತ್ತಾರೆ, “ಆ ದಿವಸಗಳಲ್ಲಿಯೂ, ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವುದಿಲ್ಲ. ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ.


ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ.


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.


ದೇವರು ಇಸ್ರಾಯೇಲನ್ನು ಅವರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವರು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.


ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು.


ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, ಎಂದು ಕರ್ತದೇವರು ನುಡಿಯುತ್ತಾರೆ.”


ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.


ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.


ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ಆಗ ದೇವದೂತನು ತನ್ನ ಮುಂದೆ ನಿಂತವರಿಗೆ, “ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದುಹಾಕಿರಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ಪಾಪವನ್ನು ತೆಗೆದುಹಾಕಿದ್ದೇನೆ. ಬದಲಾಗಿ ಶ್ರೇಷ್ಠ ವಸ್ತ್ರಗಳನ್ನು ನಿನಗೆ ತೊಡಿಸುವೆನು,” ಎಂದನು.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.


ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.


ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು