Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:2 - ಕನ್ನಡ ಸಮಕಾಲಿಕ ಅನುವಾದ

2 ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:2
29 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.


ನೀತಿವಂತನು ನಾಶವಾಗುವನು ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಭಕ್ತಿಯುಳ್ಳ ಮನುಷ್ಯರು ಕಣ್ಮರೆಯಾಗುವರು. ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾದರು ಎಂಬುದನ್ನು ಯಾರೂ ಯೋಚಿಸರು.


“ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.


ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;


“ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.


ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.


ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ. ಅವರೆಲ್ಲರೂ ಪರಾಕ್ರಮಶಾಲಿಗಳೇ.


ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು.


ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.


ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು.


ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.


ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.


“ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ.


ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ. ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ ಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ.


ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ,


ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”


ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು.


ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.


ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು