Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:20 - ಕನ್ನಡ ಸಮಕಾಲಿಕ ಅನುವಾದ

20 ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:20
17 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.


“ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು