ಮೀಕ 7:6 - ಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. ಮಗಳು ತನ್ನ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮಗನು ತಂದೆಯನ್ನು ತುಚ್ಫೀಕರಿಸುತ್ತಾನೆ, ಮಗಳು ತಾಯಿಗೆ ಎದುರೇಳುತ್ತಾಳೆ; ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ; ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು. ಅಧ್ಯಾಯವನ್ನು ನೋಡಿ |