Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:9 - ಕನ್ನಡ ಸಮಕಾಲಿಕ ಅನುವಾದ

9 ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಅವರು ನನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡೆಸುವ ತನಕ ಅವರ ಕೋಪವನ್ನು ತಾಳುವೆನು. ಆತನು ನನ್ನನ್ನು ಬೆಳಕಿಗೆ ತರುವನು. ಆತನ ನೀತಿಯನ್ನು ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಯೆಹೋವನಿಗೆ ಪಾಪಮಾಡಿದ್ದರಿಂದ ಆತನ ರೋಷವನ್ನು ತಾಳಿಕೊಂಡಿರುವೆನು; ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ ನನಗೆ ನ್ಯಾಯವನ್ನು ತೀರಿಸುವನು; ನನ್ನನ್ನು ಬೆಳಕಿಗೆ ತರುವನು, ಆತನ ರಕ್ಷಣಧರ್ಮವನ್ನು ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:9
36 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.


ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.


ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.


ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.


ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.


ಹಾಗೆಯೇ ಸಮುಯೇಲನು ಅವನಿಗೆ ಒಂದನ್ನೂ ಮರೆಮಾಡದೆ, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು, “ಅವರು ಯೆಹೋವ ದೇವರು. ಅವರಿಗೆ ಸರಿತೋರುವುದನ್ನು ಮಾಡಲಿ,” ಎಂದನು.


ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,


ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.


ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.


ನನ್ನ ಪರವಾಗಿ ವಾದಿಸಿ, ನನ್ನನ್ನು ವಿಮೋಚಿಸಿರಿ; ನಿಮ್ಮ ವಾಗ್ದಾನದ ಪ್ರಕಾರ ನನ್ನ ಬದುಕನ್ನು ಕಾಪಾಡಿರಿ.


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.


ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು.


“ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ; ಬನ್ನಿ, ನಮ್ಮ ದೇವರಾದ ಯೆಹೋವ ದೇವರ ಕ್ರಿಯೆಯನ್ನು ಚೀಯೋನಿನಲ್ಲಿ ಸಾರಿ ಹೇಳೋಣ.’


ಹೀಗಿರಲು, ‘ದೇವರು ಕಾಣುವುದಿಲ್ಲ, ನನ್ನ ವ್ಯಾಜ್ಯವು ದೇವರ ಮುಂದೆ ಇದೆ; ದೇವರಿಗಾಗಿ ಕಾದಿರುತ್ತೇನೆ,’ ಎಂದು ನೀನು ಹೇಳಿದರೆ, ದೇವರು ನಿನಗೆ ಕಿವಿಗೊಡುವರೋ?


ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ.


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು