Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:19 - ಕನ್ನಡ ಸಮಕಾಲಿಕ ಅನುವಾದ

19 ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾಜ್ಯಾ ಪ್ರಿತಿಚ್ಯಾ ಭಾವಾನು ಅನಿ ಭೆನಿಯಾನು, ಹರಿಎಕ್ಲೊಬಿ ಆಯಿಕ್ತಲ್ಲ್ಯಾತ್ ಚುರುಕ್ ಹೊವ್ನ್ ರ್‍ಹಾಂವ್ದಿತ್, ಖರೆ ಬೊಲ್ನ್ಯಾತ್ ಅನಿ ರಾಗ್ ಹೊತಲ್ಯಾತ್ ಸಾವ್ಕಾಸ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:19
54 ತಿಳಿವುಗಳ ಹೋಲಿಕೆ  

ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.


ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.


ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.


ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.


ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.


ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.


ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.


“ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.


ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.


ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ, ನಿಮ್ಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.


ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.


ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.


ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ.


ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ, ಜನರು ಕುಯುಕ್ತಿಯುಳ್ಳವನನ್ನು ಹಗೆ ಮಾಡುತ್ತಾರೆ.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.


ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.


ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು.


ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.


ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,


ಅನೇಕ ಸುಂಕದವರೂ ಪಾಪಿಗಳೆನ್ನಿಸಿಕೊಂಡವರೂ ಯೇಸುವಿನ ಉಪದೇಶವನ್ನು ಕೇಳಲು ಅವರ ಸಮೀಪಕ್ಕೆ ಬಂದರು.


ಅವರು ತಮ್ಮ ಸ್ಥಳಗಳಲ್ಲಿ ನಿಂತು ಮೂರು ತಾಸುಗಳು ತಮ್ಮ ದೇವರಾಗಿರುವ ಯೆಹೋವ ದೇವರ ನಿಯಮದ ಗ್ರಂಥವನ್ನು ಓದಿದರು. ಮತ್ತೊಂದು ಮೂರು ತಾಸುಗಳು ತಮ್ಮ ಪಾಪಗಳನ್ನು ಅರಿಕೆಮಾಡಿ, ತಮ್ಮ ದೇವರಾಗಿರುವ ಯೆಹೋವ ದೇವರನ್ನು ಆರಾಧಿಸಿದರು.


ನೀವು ಸತ್ಯವನ್ನು ತಿಳಿಯದವರೆಂದು ನಾನು ಭಾವಿಸುತ್ತಿಲ್ಲ, ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಬರುವುದಿಲ್ಲ ಎಂಬುವುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.


ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.


ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು.


ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು.


ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.


ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು.


ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.


ಮುಖ್ಯವಾಗಿ ನನ್ನ ಪ್ರಿಯರೇ, ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ “ಹೌದು” ಎನ್ನಿರಿ. ಇಲ್ಲವಾದರೆ “ಇಲ್ಲ” ಎನ್ನಿರಿ. ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.


ಪ್ರಿಯರೇ, ನಿಮ್ಮಲ್ಲಿ ಯಾವನಾದರೂ ಸತ್ಯದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ,


ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು