Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:3 - ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವು ನಿಮ್ಮ ವಿಶ್ವಾಸವನ್ನು ಒರೆಗೆ ಹಚ್ಚಿ ನಿಮ್ಮನ್ನು ದೃಢಪಡಿಸುತ್ತವೆ; ನಿಮ್ಮನ್ನು ಸಹನಶೀಲರನ್ನಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಏಕೆಂದರೆ ಅವುಗಳು ನಿಮ್ಮ ನಂಬಿಕೆಯನ್ನು ಪರಿಶೋಧಿಸಲು ಬಂದಿವೆ ಎಂಬುದು ನಿಮಗೆ ತಿಳಿದದೆ. ಅವು ನಿಮ್ಮಲ್ಲಿ ತಾಳ್ಮೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್, ತಿ ತರಾಸಾ ತುಮ್ಚೊ ವಿಶ್ವಾಸ್ ಪರಿಕ್ಷಾ ಕರುಕ್ ಯೆಲಾತ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತಿ ತರಾಸಾ ತುಮ್ಕಾ ಸೊಸುನ್ ಘೆತಲೆ ಯೆಯ್ ಸಾರ್ಕೆ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:3
15 ತಿಳಿವುಗಳ ಹೋಲಿಕೆ  

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ


ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ.


ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ನೀವು ನಿಮ್ಮ ಸಹನೆಯಿಂದ, ನಿಮ್ಮ ಪ್ರಾಣಗಳನ್ನು ಕಾಪಾಡಿಕೊಳ್ಳುವಿರಿ.


ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು