ಯಾಕೋಬನು 1:6 - ಕನ್ನಡ ಸಮಕಾಲಿಕ ಅನುವಾದ6 ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಟ್ಟು ಕೇಳಿಕೊಳ್ಳಬೇಕು. ಸಂದೇಹಪಡುವವನೋ ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆಯಂತೆ ಅಲೆಯುತ್ತಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಖರೆ ಉಲ್ಲೊಬಿ ಸಂಶೆವ್ ನಸ್ತಾನಾ ವಿಶ್ವಾಸಾನ್ ಮಾಗುಂದಿತ್, ಕಶ್ಯಾಕ್ ಮಟ್ಲ್ಯಾರ್ ಸಂಶೆವ್ ಕರ್ತಲೊ, ಸಂಮುದರಾತ್ ವಾರ್‍ಯಾನ್ ಮಾರ್ ಖಾಲ್ಲ್ಯಾ ಲಾಟಾಂಚ್ಯಾ ಸಾರ್ಕೊ ಫಿರುನ್ಗೆತ್ ರ್‍ಹಾತಾ. ಅಧ್ಯಾಯವನ್ನು ನೋಡಿ |