Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:8 - ಕನ್ನಡ ಸಮಕಾಲಿಕ ಅನುವಾದ

8 ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಎರಡು ಮನಸ್ಸುಳ್ಳವನೂ ತನ್ನ ನಡತೆಯಲ್ಲೆಲ್ಲಾ ಚಂಚಲನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೊ ದೊನ್‍ ಮನಾಚೊ ಅನಿ ಅಪ್ಲ್ಯಾ ವಾಟೆತ್ನಿ ಚಂಚಲ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:8
13 ತಿಳಿವುಗಳ ಹೋಲಿಕೆ  

ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.


ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.


ಅವರು ಯೆಹೋವ ದೇವರಿಗೆ ಆರಾಧನೆ ಮಾಡಿದರು. ಆದರೂ ಅವರು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳನ್ನು ಸಹ ಸೇವಿಸಿದರು.


ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.


“ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು.


ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ, ಆದರೂ ನಿಮ್ಮ ನಿಯಮವನ್ನು ನಾನು ಪ್ರೀತಿಸುತ್ತೇನೆ.


ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು