Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:18 - ಕನ್ನಡ ಸಮಕಾಲಿಕ ಅನುವಾದ

18 ಆದರೆ ಒಬ್ಬ ಮನುಷ್ಯನು, “ನಿನ್ನಲ್ಲಿ ನಂಬಿಕೆಯಿದೆ, ನನ್ನಲ್ಲಿ ಕ್ರಿಯೆಗಳಿವೆ,” ಎಂದು ವಾದಿಸಬಹುದು. ಅಂಥವನಿಗೆ, “ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ರುಜುಪಡಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ರುಜುಪಡಿಸುತ್ತೇನೆ,” ಎಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಲ್ಲವಾದರೆ ಒಬ್ಬ ಮನುಷ್ಯನು - ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು, ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು ನೋಡೋಣ ಎಂದು ಹೇಳುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ಕೊನ್‍ಬಿ ಎಕ್ಲೊ ಎಕ್ ಮಾನ್ಸಾಕ್ ವಿಶ್ವಾಸ್ ಹಾಯ್ ಅನಿ ಎಕ್ಲ್ಯಾಕ್ಡೆ ಕಾಮಾ ಹಾತ್, ಮನುನ್ ಮಟ್ಲ್ಯಾರ್, ತೆಕಾ ಮಾಜೊ ಜಬಾಬ್ ಅಸೊ, ಕಾಮಾ ನಸ್ತಾನಾ ವಿಶ್ವಾಸ್ ಅಸಲ್ಲೊ ಕೊನ್ ತರ್ ಎಕ್ಲೊ ಹಾಯ್ ಹೊಲ್ಲ್ಯಾರ್ ಮಾಕಾ ದಾಕ್ವು ಮಿಯಾ ಕಾಮಾಂಚ್ಯಾ ವೈನಾ ಮಾಜೊ ವಿಶ್ವಾಸ್ ತುಕಾ ದಾಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:18
20 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.


ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.


ನನ್ನ ಪ್ರಿಯರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ


ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ.


ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.


ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,


ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ:


ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು