Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:23 - ಕನ್ನಡ ಸಮಕಾಲಿಕ ಅನುವಾದ

23 ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಶಾಸ್ತ್ರದ ಮಾತು ಹೀಗೆ ನೆರವೇರಿತು, ಮತ್ತು ದೇವರ ಸ್ನೇಹಿತನೆಂಬ ಹೆಸರು ಅವನಿಗೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಅಸೆ “ಅಬ್ರಾಹಾಮಾನ್ ದೆವಾಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನ್ ತೆಚ್ಯಾ ವೈನಾ ದೆವಾನ್ ತೆಕಾ ನಿತಿವಂತ್ ಮನುನ್ ಸ್ವಿಕಾರ್ ಕರ್ಲ್ಯಾನ್” ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಪುರಾ ಹೊಲೆ ಅನಿ ಅಸೆ ಅಬ್ರಾಹಾಮ್ ದೆವಾಚೊ ವಾಂಗ್ಡಿ ಮನುನ್ ಬಲ್ವುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:23
22 ತಿಳಿವುಗಳ ಹೋಲಿಕೆ  

ಅಬ್ರಾಮನು ಯೆಹೋವ ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.


“ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?


ಈ ರೀತಿಯಾಗಿ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.”


ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.


ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ, ಅವರು ಸಹ ಮನುಷ್ಯನಿಗಾಗಿ ದೇವರ ಮುಂದೆ ವಾದಿಸುತ್ತಿದ್ದಾರೆ.


ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.


ಯೇಸು ಅವರಿಗೆ, “ನೀವು ಕೇಳುತ್ತಿದ್ದಂತೆಯೇ ಈ ಪವಿತ್ರ ವೇದದ ವಾಕ್ಯವು ಇಂದು ನೆರವೇರಿತು,” ಎಂದು ಹೇಳಲಾರಂಭಿಸಿದರು.


ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ಹೀಗೆ ಮನುಷ್ಯನು ನಂಬಿಕೆಯಿಂದ ಮಾತ್ರವಲ್ಲ ಕ್ರಿಯೆಗಳಿಂದಲೂ ನೀತಿವಂತನೆಂದು ನಿರ್ಣಯ ಹೊಂದುತ್ತಾನೆ ಎಂದು ನೀವು ನೋಡುತ್ತೀರಿ.


ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು