Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:3 - ಕನ್ನಡ ಸಮಕಾಲಿಕ ಅನುವಾದ

3 ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಆ ವ್ಯಕ್ತಿಗೆ, “ನೀವು ಇಲ್ಲಿಯ ಗೌರವ ಪೀಠದಲ್ಲಿ ಕುಳಿತುಕೊಳ್ಳಿರಿ,” ಎಂತಲೂ ಆ ಬಡವನಿಗೆ, “ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ,” ಎಂತಲೂ ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ, ನೀವು ಸೊಗಸಾದ ಉಡುಪನ್ನು ಧರಿಸಿದವನಿಗೆ ಗೌರವದಿಂದ, “ಬನ್ನಿ ಸ್ವಾಮೀ ಬನ್ನಿ, ದಯವಿಟ್ಟು ಈ ಪೀಠವನ್ನು ಅಲಂಕರಿಸಿ,” ಎನ್ನುತ್ತೀರಿ. ಬಡವನಿಗೆ, “ನೀನು ಅಲ್ಲಿಯೇ ನಿಂತುಕೋ, ಇಲ್ಲವೇ ಕೆಳಗೆ, ನನ್ನ ಕಾಲ ಬಳಿ ಕುಳಿತುಕೋ,” ಎನ್ನಿತ್ತೀರಿ. ಹೀಗಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಶೋಭಾಯಮಾನವಾದ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಮರ್ಯಾದೆಯಿಂದ ನೋಡಿ ಅವನಿಗೆ - ನೀವು ಇಲ್ಲಿ ಈ ಸುಖಾಸನದ ಮೇಲೆ ಕೂತುಕೊಳ್ಳಿರಿ ಎಂತಲೂ ಆ ಬಡಮನುಷ್ಯನಿಗೆ - ನೀನು ಅಲ್ಲಿ ನಿಂತುಕೋ, ಇಲ್ಲವೆ ನನ್ನ ಕಾಲ್ಮಣೆಯ ಹತ್ತಿರ ನೆಲದ ಮೇಲೆ ಕೂತುಕೋ ಎಂತಲೂ ಹೇಳಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಳ್ಳೆಯ ವಸ್ತ್ರಗಳನ್ನು ಧರಿಸಿರುವವನಿಗೆ ವಿಶೇಷ ಗಮನವನ್ನು ನೀಡುವಿರಿ. “ಉತ್ತಮವಾದ ಈ ಸ್ಥಳದಲ್ಲಿ ನೀವು ಕುಳಿತುಕೊಳ್ಳಿ” ಎಂದು ಅವನಿಗೆ ಹೇಳುವಿರಿ. ಆದರೆ ಆ ಬಡ ಮನುಷ್ಯನಿಗೆ “ಅಲ್ಲೇ ನಿಂತುಕೊ!” ಎಂದಾಗಲಿ, “ನಮ್ಮ ಪಾದಗಳ ಬಳಿ ನೆಲದ ಮೇಲೆ ಕುಳಿತುಕೊ!” ಎಂದಾಗಲಿ ಹೇಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತರ್ ತುಮಿ ಬರೆ ಕಪ್ಡೆ ನೆಸುನ್ ಯೆಲ್ಲ್ಯಾಕ್ ಲೈ ಬರೆ ಕರ್ತ್ಯಾಸಿ ಅನಿ ಬರೆ ಹೊತ್ತ್ಯಾ ಹ್ಯಾ ಜಾಗ್ಯಾವರ್ತಿ ಬಸ್ ಮನುನ್ ತೆಕಾ ಸಾಂಗ್ತಾಸಿ, ಖರೆ ತ್ಯಾ ಗರಿಬ್ ಮಾನ್ಸಾಕ್ “ಥೈಚ್ ಇಬೆ ರ್‍ಹಾ!” ನಾತರ್, ಆಮ್ಚ್ಯಾ ಪಾಯಾಂಚ್ಯಾ ಜಗೊಳ್ ಜಿಮ್ನಿ ವರ್ತಿ ಬಸ್! ಮನುನ್ ತರ್ ಸಾಂಗ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:3
8 ತಿಳಿವುಗಳ ಹೋಲಿಕೆ  

ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.


ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.


ಆಗ ಹೆರೋದನು ತನ್ನ ಸೈನಿಕರೊಂದಿಗೆ ಯೇಸುವನ್ನು ತಿರಸ್ಕರಿಸಿ, ಹಾಸ್ಯಮಾಡಿ, ಅವರ ಮೇಲೆ ರಾಜವಸ್ತ್ರವನ್ನು ಹೊದಿಸಿ ಅವರನ್ನು ತಿರುಗಿ ಪಿಲಾತನ ಬಳಿಗೆ ಕಳುಹಿಸಿದನು.


ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಹರಕು ಬಟ್ಟೆ ಹಾಕಿಕೊಂಡು ಬರಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು