Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:6 - ಕನ್ನಡ ಸಮಕಾಲಿಕ ಅನುವಾದ

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ತುಮಿ ತ್ಯಾ ಗರಿಬಾಕ್ನಿ ಮಾನ್ ದಿಲ್ಲ್ಯಾಸಿ ನಾ ಸಾವ್ಕಾರ್ ಲೊಕಾ ತುಮ್ಕಾ ತುಡ್ವುತಾತ್ ಅನಿ ವೊಡುನ್ ಚವ್ಕಸಿ ಕರ್ತಲ್ಯಾ ಜಾಗ್ಯಾಕ್ ನ್ಹೆತಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:6
38 ತಿಳಿವುಗಳ ಹೋಲಿಕೆ  

ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.


ಉಣ್ಣುವುದಕ್ಕೂ, ಕುಡಿಯುವುದಕ್ಕೂ ನಿಮಗೆ ಮನೆಗಳಿಲ್ಲವೇ? ಅಥವಾ ದೇವರ ಸಭೆಯನ್ನು ಹೀನೈಸಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಇದಕ್ಕಾಗಿ ನಾನು ನಿಮ್ಮನ್ನು ಹೊಗಳಬೇಕೆ? ಖಂಡಿತ ಇಲ್ಲ.


ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.


ದುಷ್ಟತ್ವ ನಡೆಸುವವರೇ, ನೀವು ಬಡವರ ಯೋಜನೆಗಳನ್ನು ನಿರಾಶೆಗೊಳಿಸುತ್ತೀರಿ, ಆದರೆ ಯೆಹೋವ ದೇವರೇ ಅವರ ಆಶ್ರಯವಾಗಿದ್ದಾರೆ.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಆ ವ್ಯಕ್ತಿಗೆ, “ನೀವು ಇಲ್ಲಿಯ ಗೌರವ ಪೀಠದಲ್ಲಿ ಕುಳಿತುಕೊಳ್ಳಿರಿ,” ಎಂತಲೂ ಆ ಬಡವನಿಗೆ, “ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ,” ಎಂತಲೂ ಹೇಳಿದರೆ,


ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.


ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ ” ಎಂಬುದು.


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.


ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ.


ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,


ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?


ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಅವನ ಕೈಯಲ್ಲಿ ಸಿಕ್ಕುವವರು ಜಜ್ಜಿಹೋಗುತ್ತಾರೆ, ಅವನ ಬಲದ ಎದುರು ಸೋತುಹೋಗುತ್ತಾರೆ.


ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;


ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.


ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು; ತಾನು ನಿರ್ಮಿಸದ ಮನೆಗಳನ್ನು ವಶಪಡಿಸಿಕೊಂಡಿದ್ದಾನೆ.


ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.


ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.


ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು