Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:13 - ಕನ್ನಡ ಸಮಕಾಲಿಕ ಅನುವಾದ

13 ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮ್ಚ್ಯಾ ಮದ್ದಿ ಬುದ್ವಂತಾ ಅನಿ ಕಳಲ್ಲಿ ಲೊಕಾ ಹಾತ್ ಕಾಯ್? ತೆನಿ ಖರಿ ಕಾಮಾ ಕರ್ತಲ್ಯಾ ವೈನಾ ತೆ ದಾಕ್ವುನ್ ದಿಂವ್ದಿತ್. ತೆನಿ ಸಾದೆಪಾನಾನ್ ಕರಲ್ಲ್ಯಾ ಬರ್ಯಾ ಕಾಮಾಚ್ಯಾ ವೈನಾ ಬುದ್ದ್ ಉತ್ಪನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:13
46 ತಿಳಿವುಗಳ ಹೋಲಿಕೆ  

ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಆದರೆ ಒಬ್ಬ ಮನುಷ್ಯನು, “ನಿನ್ನಲ್ಲಿ ನಂಬಿಕೆಯಿದೆ, ನನ್ನಲ್ಲಿ ಕ್ರಿಯೆಗಳಿವೆ,” ಎಂದು ವಾದಿಸಬಹುದು. ಅಂಥವನಿಗೆ, “ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ರುಜುಪಡಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ರುಜುಪಡಿಸುತ್ತೇನೆ,” ಎಂದು ಹೇಳಬಹುದು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಜ್ಞಾನಿಯ ಹಾಗೆ ಇರುವವರು ಯಾರು? ಈ ಸಂಗತಿಗಳ ಅರ್ಥವನ್ನು ವಿವರಿಸಬಲ್ಲವರು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖವನ್ನು ಬೆಳಗಿಸುತ್ತದೆ ಜ್ಞಾನವು ಕಠಿಣ ಮುಖಭಾವವನ್ನು ಸಹ ಬದಲಾಯಿಸುತ್ತದೆ.


ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.


ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.


ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.


ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಆದ್ದರಿಂದ, ಇವರೊಂದಿಗೆ ನಿಮಗಿರುವ ಪ್ರೀತಿಯನ್ನೂ ನಿಮ್ಮ ಬಗ್ಗೆಯಿರುವ ನಮ್ಮ ಹೊಗಳಿಕೆಯನ್ನೂ ಸಭೆಗಳವರ ಮುಂದೆ ರುಜುಪಡಿಸಿ ತೋರಿಸಿರಿ.


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


“ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು.


ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.


ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.


ಅರಸನ ಆಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸುವುದಿಲ್ಲ, ಜ್ಞಾನಿಯ ಹೃದಯವು ಸರಿಯಾದ ಕಾಲ ಕ್ರಮವನ್ನು ತಿಳಿದುಕೊಳ್ಳುತ್ತದೆ.


ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.


ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ, ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.


ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.


ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು