Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:6 - ಕನ್ನಡ ಸಮಕಾಲಿಕ ಅನುವಾದ

6 ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆಚ್ ಜಿಬಿಲ್‌ಬಿ ಆಗ್ ಹೊವ್ನ್ ಹಾಯ್, ಜಿಬಿಲ್ ಎಕ್ ಬರ್‍ಯಾ ವಾಟೆನ್ ಚಲಿನಸಲ್ಲ್ಯಾ ಜಗಾಚ್ಯಾ ಸಾರ್ಕೆ ಅಮ್ಚ್ಯಾ ಆಂಗಾಚ್ಯಾ ಮದ್ದಿ ಥವಲ್ಲಿ ಹಾಯ್, ತಿ ಸಗ್ಳ್ಯಾ ಆಂಗಾಕುಚ್ ಹಾಳ್ ಘಾಲ್ತಾ ಅನಿ ನರಕ್ ಮನ್ತಲ್ಯಾ ಆಗಿತ್ ಅಪ್ನಿಚ್ ಪೆಟುನ್ಗೆತ್ ಸಗ್ಳ್ಯಾ ಜಿವನಾಕ್ ಆಗ್ ಲಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:6
62 ತಿಳಿವುಗಳ ಹೋಲಿಕೆ  

ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.


ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ.


ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.


ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.


ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.


ಅವರು ತಮ್ಮ ನಾಲಿಗೆಯನ್ನು ಖಡ್ಗದಂತೆ ಮಸೆಯುತ್ತಾರೆ.


ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ.


ನೀವು ಕರೆಸಿಕೊಳ್ಳುವ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೇ?


ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.


ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು,


ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.


ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.


ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.


ಅಬೀಯನೂ, ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿದರು. ಇಸ್ರಾಯೇಲರಲ್ಲಿ ಐದು ಲಕ್ಷಮಂದಿ ಬಲಶಾಲಿಗಳಾದ ಸೈನಿಕರು ಹತರಾದರು.


ಆಗ ಅಬ್ಷಾಲೋಮನು ಅಹೀತೋಫೆಲನಿಗೆ, “ನಾವು ಮಾಡಬೇಕಾದದ್ದನ್ನು ನೀವು ಯೋಚನೆ ಮಾಡಿ ಹೇಳಿರಿ,” ಎಂದನು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.


ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.


ಅವು ವ್ಯಭಿಚಾರಿಣಿಯಿಂದಲೂ ಸವಿಮಾತನಾಡುವ ದಾರಿತಪ್ಪಿದ ಸ್ತ್ರೀಯಿಂದಲೂ ನಿನ್ನನ್ನು ಕಾಪಾಡುತ್ತವೆ.


ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.


ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು