ಯಾಕೋಬನು 4:11 - ಕನ್ನಡ ಸಮಕಾಲಿಕ ಅನುವಾದ11 ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಭಾವಾನು ಅನಿ ಭೆನಿಯಾನು, ಎಕಾಮೆಕಾಚ್ಯಾ ವಿಶಯಾತ್ ಬುರ್ಶಿ ಗೊಸ್ಟಿಯಾ ಬೊಲುನಕಾಸಿ, ಅಸೆ ಅನಿಎಕ್ಲ್ಯಾಚ್ಯಾ ವಿರೊದ್ ಬುರ್ಶೆ ಬೊಲ್ತಲೊ ನಾತರ್ ಝಡ್ತಿ ಕರ್ತಲೊ ಖಾಯ್ದ್ಯಾಂಚ್ಯಾ ವಿರೊದ್ ವಾಯ್ಟ್ ಬೊಲ್ತಾ ಅನಿ ವಿರೊದ್ ಕರ್ತಾ. ಅಸೆ ಹೊವ್ನ್ ತುಮಿ ಖಾಯ್ದೆ ಪಾಳ್ತಲೆ ನ್ಹಯ್ ಝಡ್ತಿ ಕರ್ತಲೆ ಹೊವ್ನ್ ಹಾಸಿ! ಅಧ್ಯಾಯವನ್ನು ನೋಡಿ |