ಯಾಕೋಬನು 5:12 - ಕನ್ನಡ ಸಮಕಾಲಿಕ ಅನುವಾದ12 ಮುಖ್ಯವಾಗಿ ನನ್ನ ಪ್ರಿಯರೇ, ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ “ಹೌದು” ಎನ್ನಿರಿ. ಇಲ್ಲವಾದರೆ “ಇಲ್ಲ” ಎನ್ನಿರಿ. ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮುಖ್ಯವಾಗಿ, ನನ್ನ ಸಹೋದರರೇ, ಆಣೆ ಇಡಲೇಬೇಡಿರಿ; ಆಕಾಶದ ಮೇಲಾಗಲಿ ಭೂವಿುಯ ಮೇಲಾಗಲಿ ಇನ್ನಾತರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನ್ನ ಸಹೋದರ ಸಹೋದರಿಯರೇ, ನೀವು ವಾಗ್ದಾನ ಮಾಡುವಾಗ ಆಣೆ ಇಡಬೇಡಿರಿ. ಇದು ಬಹಳ ಮುಖ್ಯವಾದದ್ದು. ನಿಮ್ಮ ಹೇಳಿಕೆಯನ್ನು ನಿರೂಪಿಸಲು ಪರಲೋಕದ, ಭೂಲೋಕದ ಮತ್ತು ಬೇರಾವುದರ ಹೆಸರನ್ನೂ ಬಳಸಬೇಡಿ. ಹೌದಾಗಿದ್ದರೆ, “ಹೌದು” ಎನ್ನಿರಿ. ಇಲ್ಲವಾಗಿದ್ದರೆ, “ಇಲ್ಲ” ಎನ್ನಿರಿ. ನೀವು ಹೀಗೆ ಮಾಡಿದರೆ, ನಿಮಗೆ ದೋಷಿಗಳೆಂಬ ತೀರ್ಪಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಲೈ ಕರುನ್ ಮಾಜ್ಯಾ ಭಾವಾನು ಅನಿ ಭೆನಿಯಾನು ತುಮಿ ಗೊಸ್ಟ್ ದಿತಾನಾ ಅನ್ ಘಾಲುನಕಾಸಿ, ಜಿಮ್ನಿಚ್ಯಾ ನಾವಾನ್ ಹೊಂವ್ದಿತ್, ಸರ್‍ಗಾಚ್ಯಾ ನಾವಾನ್ ಹೊಂವ್ದಿತ್, ನಾತರ್ ಅನ್ ಘಾಲುಚ್‌ನಕಾಸಿ, ಹೊಯ್ ಮನುನ್ ಹೊಲ್ಯಾರ್ ಹೊಯ್ ಮನಾ, ನಾ ಮನ್ತಲೆ ಹೊಲ್ಯಾರ್ ನಾ ಮನಾ, ತನ್ನಾ ತುಮ್ಚಿ ಝಡ್ತಿ ಹೊಯ್ನಾ. ಅಧ್ಯಾಯವನ್ನು ನೋಡಿ |