Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:14 - ಕನ್ನಡ ಸಮಕಾಲಿಕ ಅನುವಾದ

14 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮಲ್ಲಿ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಅವನಿಗೆ ಎಣ್ಣೆಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮಲ್ಲಿ ಕಾಯಿಲೆಯಾಗಿರುವವನು ಸಭಾಹಿರಿಯರನ್ನು ಕರೆಯಿಸಬೇಕು. ಹಿರಿಯರು ಅವನಿಗೆ ಎಣ್ಣೆಯನ್ನು ಹಚ್ಚಿ, ಪ್ರಭುವಿನ ಹೆಸರಿನಲ್ಲಿ ಅವನಿಗೋಸ್ಕರ ಪ್ರಾರ್ಥಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಚ್ಯಾತ್ಲೆ ಕೊನ್‌ಬಿ ಶಿಕ್ ಹಾಯ್ ಹೊಲ್ಯಾರ್ ತೆನಿ ತಾಂಡ್ಯಾಚ್ಯಾ ಜಾನ್ತ್ಯಾಕ್ನಿ ಬಲ್ವುಚೆ ಅನಿ ಜಾಂನ್ತ್ಯಾನಿ ಧನಿಯಾಚ್ಯಾ ನಾವಾನ್ ತೆಲ್ ಲಾವುನ್ ಶಿಕ್ ಹೊತ್ತ್ಯಾಂಚ್ಯಾ ಸಾಟ್ನಿ ಮಾಗ್ನಿ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:14
11 ತಿಳಿವುಗಳ ಹೋಲಿಕೆ  

ಅವರು ಅನೇಕರಿಂದ ದೆವ್ವಗಳನ್ನೋಡಿಸಿ, ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಗುಣಪಡಿಸಿದರು.


ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.


ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.


ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.


ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.


ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಅವನು ಒಳಗೆ ಪ್ರವೇಶಿಸಿ, ಯಾರೂ ಒಳಗೆ ಬಾರದಂತೆ ಬಾಗಿಲು ಮುಚ್ಚಿಕೊಂಡು, ಯೆಹೋವ ದೇವರನ್ನು ಪ್ರಾರ್ಥಿಸಿದನು.


ಅವನು ಬಾಲಕನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವ ದೇವರೇ, ಈ ಬಾಲಕನ ಪ್ರಾಣ ಅವನಲ್ಲಿ ತಿರುಗಿಬರಲಿ,” ಎಂದು ಯೆಹೋವ ದೇವರನ್ನು ಕೂಗಿದನು.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು