Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:2 - ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಐಶ್ವರ್ಯವು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ಐಶ್ವರ್ಯ ನಾಶವಾಗಿದೆ. ನಿಮ್ಮ ಬೆಲೆಬಾಳುವ ಬಟ್ಟೆಗಳಿಗೆ ನುಸಿಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಧನವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ಮಣ್ಣು ಹಿಡಿದವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ಶ್ರೀಮಂತಿಕೆಯು ಕೊಳೆತುಹೋಗುತ್ತದೆ ಮತ್ತು ಬೆಲೆಯಿಲ್ಲದಂತಾಗುತ್ತದೆ. ನಿಮ್ಮ ಬಟ್ಟೆಗಳನ್ನು ನುಸಿಗಳು ತಿಂದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮ್ಚಿ ಸಾವ್ಕಾರ್ಕಿ ಕುಸುನ್ ಗೆಲಾ ಅನಿ ತುಮ್ಚ್ಯಾ ಕಪ್ಡ್ಯಾಕ್ನಿ ಕಿಡ್ ಖಾವ್ನ್ ಗೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:2
10 ತಿಳಿವುಗಳ ಹೋಲಿಕೆ  

“ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.


ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು.


ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.


ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.


ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.


ನಾನು ಎಫ್ರಾಯೀಮಿಗೆ ನುಸಿಯ ಹಾಗೆಯೂ, ಯೆಹೂದದ ಮನೆತನದವರಿಗೆ ಕೊಳೆಯುವಿಕೆಯ ಹಾಗೆಯೂ ಇರುವೆನು.


ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಹರಕು ಬಟ್ಟೆ ಹಾಕಿಕೊಂಡು ಬರಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು