Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:7 - ಕನ್ನಡ ಸಮಕಾಲಿಕ ಅನುವಾದ

7 ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಹೋದರರೇ, ಕರ್ತನು ಪ್ರತ್ಯಕ್ಷನಾಗುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂವಿುಯ ಬೆಲೆಯುಳ್ಳ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಸೆ ರ್‍ಹಾತಾನಾ ಮಾಜ್ಯಾ ಭಾವಾನು ಅನಿ ಭೆನಿಯಾನು, ಧನಿ ಯೆಯ್ ಪತರ್ ಗಮ್ಮ್ ಧರುನ್ ಘೆವ್ನ್ ರ್‍ಹಾವಾ, ಎಕ್ ಸೆತ್ಕಾರಿ ಅಪ್ನಾಚ್ಯಾ ಶೆತಾತ್ಲ್ಯಾ ಪಿಕ್ಕಾಕ್ ಕಸೆ ರಾಕುನ್ ರ್‍ಹಾತಾ ತೆ ಬಗಾ, ತೊ ಶಾಂತ್ಪಾನಾನಿ ಗಮ್ ಧರುನ್ ಘೆವ್ನ್ ಸಮಾದಾನಾನಿ ಪೈಲೆಚೊ ಅನಿ ಆಕ್ರಿಚೊ ಪಾವ್ಸ್ ಯೆಯ್‍ ಪತರ್ ಅಪ್ನಾಚ್ಯಾ ಫೈರಾಸಾಟ್ನಿ ರಾಕುನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:7
32 ತಿಳಿವುಗಳ ಹೋಲಿಕೆ  

ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಪಡೆದುಕೊಂಡನು.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.


ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.


ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?


ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಏಕೆಂದರೆ ಮಿಂಚು ಪೂರ್ವದಿಂದ ಮಿನುಗಿ ಪಶ್ಚಿಮದವರೆಗೆ ಹೊಳೆಯುವಂತೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.


ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.


“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.


ಆಗ ಮನುಷ್ಯಪುತ್ರನಾದ ನಾನು ಶಕ್ತಿಯಿಂದಲೂ ಮಹಾ ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಜನರು ಕಾಣುವರು.


ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.


ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.


ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.


ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.


ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದಿವೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದುಬಿಡುವುದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.


ನನ್ನ ಪ್ರಿಯರೇ, ಕರ್ತದೇವರ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯವಾಗಿ ಆದರ್ಶವಾಗಿ ಇಟ್ಟುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು