Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:13 - ಕನ್ನಡ ಸಮಕಾಲಿಕ ಅನುವಾದ

13 ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:13
15 ತಿಳಿವುಗಳ ಹೋಲಿಕೆ  

ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


“ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.


“ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,


ಆಗ ನಿಮ್ಮ ದಹನಬಲಿಗಳನ್ನೂ, ರಕ್ತಮಾಂಸವನ್ನೂ, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸಬೇಕು. ನಿಮ್ಮ ಬಲಿಗಳ ರಕ್ತವನ್ನು ನಿನ್ನ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಸುರಿಯಬೇಕು. ಅನಂತರ ಮಾಂಸ ಊಟಮಾಡಬಹುದು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.


“ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.


ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.


ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.


ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.


ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು.


ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು