Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:17 - ಕನ್ನಡ ಸಮಕಾಲಿಕ ಅನುವಾದ

17 ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಆ ಪಕ್ಷಿಯನ್ನು ರೆಕ್ಕೆಗಳ ಸಂದುಗಳಲ್ಲಿ ಹರಿಯಬೇಕು, ಆದರೆ ರೆಕ್ಕೆಗಳನ್ನು ಪೂರಾ ಕಿತ್ತು ಹಾಕಕೂಡದು. ಅನಂತರ ಅವನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:17
20 ತಿಳಿವುಗಳ ಹೋಲಿಕೆ  

ಅನಂತರ ಅವನು ಇವುಗಳನ್ನೆಲ್ಲಾ ಯೆಹೋವ ದೇವರಿಗಾಗಿ ತೆಗೆದುಕೊಂಡು ಬಂದು ಎರಡೆರಡು ಹೋಳುಮಾಡಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು. ಆದರೆ ಅವನು ಪಕ್ಷಿಗಳನ್ನು ತುಂಡು ಮಾಡಲಿಲ್ಲ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.


ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


ಯೇಸು ತಿರುಗಿ ಗಟ್ಟಿಯಾಗಿ ಕೂಗಿ, ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.


ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು.


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದು ಕೊಡಲು, ಅವನು ಅವುಗಳನ್ನು ಬಲಿಪೀಠದ ಮೇಲೆ ಸುಟ್ಟನು.


ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.


“ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.


ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.


ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.


ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು