ಯಾಜಕಕಾಂಡ 1:2 - ಕನ್ನಡ ಸಮಕಾಲಿಕ ಅನುವಾದ2 ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನಿಮ್ಮಲ್ಲಿ ಯಾರಾದರೂ ಸರ್ವೇಶ್ವರನಿಗೆ ಒಂದು ಪ್ರಾಣಿಯನ್ನು ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ ಆಡುಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಜ್ಞಾಪಿಸಬೇಕಾದದ್ದೇನಂದರೆ - ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅದನ್ನು ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ತೆಗೆದುಕೊಂಡು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು. ಅಧ್ಯಾಯವನ್ನು ನೋಡಿ |