Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:4 - ಕನ್ನಡ ಸಮಕಾಲಿಕ ಅನುವಾದ

4 ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅರ್ಪಿಸುವವನು ಆ ಪ್ರಾಣಿಯ ತಲೆಯ ಮೇಲೆ ಕೈಯಿಡಬೇಕು. ಆಗ ಅದು ಅವನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಅಂಗೀಕೃತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದಕ್ಕಾಗಿ ಅಂಗೀಕಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:4
44 ತಿಳಿವುಗಳ ಹೋಲಿಕೆ  

ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.


ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


“ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.


“ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಪುತ್ರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


“ಆ ಇನ್ನೊಂದು ಟಗರನ್ನು ನೀನು ತಂದಾಗ, ಆರೋನನೂ ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”


ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.


ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.


ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.


ಅವನು ಪ್ರತಿಷ್ಠೆಯ ಟಗರಾದ ಇನ್ನೊಂದು ಟಗರನ್ನು ತಂದನು. ಆಗ ಆರೋನನೂ, ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.


ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.


ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.


ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.


ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.


ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.


ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.


“ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.


“ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು.


ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು.


ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.


ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


ಇಸ್ರಾಯೇಲರು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ದೋಷವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಯೆಹೋವ ದೇವರ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.


ಅವರನ್ನು ಪ್ರತಿಷ್ಠೆ ಮಾಡುವುದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವುದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿದವುಗಳನ್ನು ಅವರೇ ಊಟಮಾಡಬೇಕು. ಇತರರು ಅದನ್ನು ಉಣ್ಣಬಾರದು. ಏಕೆಂದರೆ ಅವು ಪರಿಶುದ್ಧವಾದವುಗಳು.


ಅವರು ಪಾಪ ಪರಿಹಾರದ ಬಲಿಯ ತಲೆಯ ಮೇಲೆ ತಮ್ಮ ಕೈಯನ್ನು ಇಟ್ಟು, ದೋಷಪರಿಹಾರ ಬಲಿಯಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.


ನೀನು ಲೇವಿಯರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕರೆತಂದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.


ಇಸ್ರಾಯೇಲಿನ ನೀರಿರುವ ಹುಲ್ಲುಗಾವಲುಗಳಿಂದ ಇನ್ನೂರು ಮಂದಿಯ ಹಿಂಡಿನಿಂದ ಒಂದು ಕುರಿಯನ್ನು ತೆಗೆದುಕೊಳ್ಳಬೇಕು. ಇವುಗಳನ್ನು ಜನರಿಗಾಗಿ ಪ್ರಾಯಶ್ಚಿತ್ತವನ್ನು ಮಾಡಲು ಧಾನ್ಯಯಜ್ಞಗಳು, ದಹನಬಲಿಗಳು ಮತ್ತು ಸಮಾಧಾನದ ಅರ್ಪಣೆಗಳಿಗಾಗಿ ಬಳಸಲಾಗುವುದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ದಹನಬಲಿಗಾಗಿ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು