Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:5 - ಕನ್ನಡ ಸಮಕಾಲಿಕ ಅನುವಾದ

5 ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿರುವ ಯಜ್ಞವೇದಿಗೆ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:5
25 ತಿಳಿವುಗಳ ಹೋಲಿಕೆ  

ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.


ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ಲೇವಿಯರು ಪಸ್ಕದ ಕುರಿಮರಿಯನ್ನು ವಧಿಸಿದ ತರುವಾಯ, ಯಾಜಕರು ಅವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಆದರೆ ಲೇವಿಯರು ಚರ್ಮವನ್ನು ಸುಲಿದರು,


ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ತರುವಾಯ ಆ ಟಗರನ್ನು ನೀನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.


ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು.


ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಮತ್ತು ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ?


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


“ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು.


“ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.


ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.


ತರುವಾಯ ನೀನು ಆ ಹೋರಿಯನ್ನು ಯೆಹೋವ ದೇವರ ಮುಂದೆ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.


ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.


ಅವರು ಪಾಪ ಪರಿಹಾರದ ಬಲಿಯ ತಲೆಯ ಮೇಲೆ ತಮ್ಮ ಕೈಯನ್ನು ಇಟ್ಟು, ದೋಷಪರಿಹಾರ ಬಲಿಯಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.


ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.


ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಹೋರಿಯನ್ನು ಸಮರ್ಪಣೆ ಮಾಡಿದ ತರುವಾಯ, ಮಗುವನ್ನು ಏಲಿಯ ಬಳಿಗೆ ತಂದರು.


ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.


“ನೀನು ದಹನಬಲಿಯ ಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡಬೇಕು.


ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು