Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:14 - ಕನ್ನಡ ಸಮಕಾಲಿಕ ಅನುವಾದ

14 ನೀನೂ, ನಿನ್ನೊಂದಿಗೆ ನಿನ್ನ ಪುತ್ರರೂ ನಿನ್ನ ಪುತ್ರಿಯರೂ ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಿಸುವ ತೊಡೆಯ ಭಾಗವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ಇಸ್ರಾಯೇಲರ ಸಮಾಧಾನದ ಬಲಿಗಳಲ್ಲಿ ನಿನಗೂ ನಿನ್ನ ಪುತ್ರರಿಗೂ ಸಲ್ಲುವಂಥವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವು ಯಾಜಕನಿಗೆಂದೇ ಪ್ರತ್ಯೇಕವಾಗಿ ಆರತಿಯೆತ್ತಿ ಅರ್ಪಿಸಿದ ಎದೆಯ ಭಾಗವನ್ನು ಮತ್ತು ತೊಡೆಯನ್ನು ಯಾವುದಾದರೂ ಒಂದು ಶುದ್ಧ ಸ್ಥಳದಲ್ಲಿ ಊಟಮಾಡಬಹುದು. ನೀವೂ ನಿಮ್ಮ ಕುಟುಂಬದವರು ಅದನ್ನು ತಿನ್ನಬಹುದು. ಏಕೆಂದರೆ, ಇಸ್ರಯೇಲರು ಸಮರ್ಪಿಸುವ ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಇವು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನೂ ಯಾವದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ ನಿನ್ನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಅದನ್ನು ತಿನ್ನಬಹುದು. ಯಾಕಂದರೆ ಇಸ್ರಾಯೇಲ್ಯರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:14
10 ತಿಳಿವುಗಳ ಹೋಲಿಕೆ  

“ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ಅವರನ್ನು ಪ್ರತಿಷ್ಠೆ ಮಾಡುವುದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವುದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿದವುಗಳನ್ನು ಅವರೇ ಊಟಮಾಡಬೇಕು. ಇತರರು ಅದನ್ನು ಉಣ್ಣಬಾರದು. ಏಕೆಂದರೆ ಅವು ಪರಿಶುದ್ಧವಾದವುಗಳು.


ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ದಹನ ಮಾಡಿದ ಯೆಹೋವ ದೇವರ ಯಜ್ಞಗಳಲ್ಲಿ ಇವು ನಿನಗೂ ನಿನ್ನ ಪುತ್ರರಿಗೂ ಸಲ್ಲತಕ್ಕವುಗಳು. ಏಕೆಂದರೆ ಹಾಗೆ ನನಗೆ ಆಜ್ಞೆಯಾಗಿದೆ.


ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.


ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು