Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:16 - ಕನ್ನಡ ಸಮಕಾಲಿಕ ಅನುವಾದ

16 ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜನರೆಲ್ಲರ ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಬಗ್ಗೆ ಅದು ಏನಾಯಿತೆಂದು ಮೋಶೆ ವಿಚಾರಿಸಿದಾಗ ಅದನ್ನು ಸುಟ್ಟುಬಿಟ್ಟರೆಂದು ತಿಳಿದುಬಂದಿತು. ಇದನ್ನು ಕೇಳಿ ಮೋಶೆ, ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 [ಜನರೆಲ್ಲರಿಗೋಸ್ಕರ] ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತನ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೋಶೆಯು ಪಾಪಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಕುರಿತು ವಿಚಾರಿಸಿದಾಗ, ಅದನ್ನು ಸುಟ್ಟುಬಿಟ್ಟರೆಂದು ಕೇಳಿ ಆರೋನನ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್‌ರವರ ಮೇಲೆ ಬಹುಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:16
12 ತಿಳಿವುಗಳ ಹೋಲಿಕೆ  

ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು.


ಅದಾದ ಮೇಲೆ ಆರೋನನು ಜನರಿಗಾಗಿ ಅರ್ಪಿಸಿದ ಬಲಿಯನ್ನು ತಂದು, ಹೋತವನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಪರಿಹಾರದ ಬಲಿಯಾಗಿರುವುದನ್ನು ವಧಿಸಿ, ಮೊದಲನೆಯದರ ಹಾಗೆ ಅದನ್ನು ಸಮರ್ಪಿಸಿದನು.


“ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.


ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.


ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು.


ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.


ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.


ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು