ಯಾಜಕಕಾಂಡ 10:3 - ಕನ್ನಡ ಸಮಕಾಲಿಕ ಅನುವಾದ3 ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.