Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸತ್ತೀರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾದೀತು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲ್ಯರ ಮನೆತನದವರೇ ದುಃಖಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:6
23 ತಿಳಿವುಗಳ ಹೋಲಿಕೆ  

ನೀವು ಈಗ ಯೆಹೋವ ದೇವರ ಕಡೆಯಿಂದ ತಿರುಗಿ ಹೋಗುತ್ತೀರಲ್ಲಾ? “ ‘ಈ ಹೊತ್ತು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬಿದ್ದರೆ, ನಾಳೆ ಅವರು ಇಸ್ರಾಯೇಲ್ ಜನಾಂಗದ ಮೇಲೆ ರೌದ್ರವುಳ್ಳವರಾಗುವರು.


ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.


ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.


ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು.


“ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.


“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.


ನಿನ್ನ ಮುದ್ದುಮಕ್ಕಳಿಗೋಸ್ಕರ ತಲೆ ಬೋಳಿಸಿಕೊಂಡು ಕ್ಷೌರಮಾಡಿಸಿಕೋ. ನಿನ್ನ ಬೋಳುತನವನ್ನು ಹದ್ದಿನಂತೆ ಮಾಡಿಕೋ. ಏಕೆಂದರೆ ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗುವರು.


“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.


ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.


ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ.


ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಯಾಜಕನು ಆ ಸ್ತ್ರೀಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಿ, ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು, ಅವಳ ಕೈಗಳಲ್ಲಿ ಸಂಶಯ ಸೂಚಿಸುವ ಕಾಣಿಕೆಯಾದ ನೈವೇದ್ಯದ ಹಿಟ್ಟನ್ನು ಇಡಬೇಕು. ಯಾಜಕನ ಕೈಯಲ್ಲಿ ಶಾಪತರುವ ಕಹಿಯಾದ ನೀರು ಇರಬೇಕು.


ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.


ಆರೋನನನ್ನೂ, ಅವನ ಮಗ ಎಲಿಯಾಜರನನ್ನೂ ತೆಗೆದುಕೊಂಡು, ಅವರನ್ನು ಹೋರ್ ಬೆಟ್ಟಕ್ಕೆ ಕರೆದುಕೊಂಡು ಬಾ.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು