Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆ ಆರೋನರಿಗೆ ಹೀಗೆ ಹೇಳಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಹೀಗೆಂದು ಆಜ್ಞಾಪಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಆಜ್ಞಾಪಿಸಿದ್ದೇನೆಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆ ಆರೋನರಿಗೆ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:1
10 ತಿಳಿವುಗಳ ಹೋಲಿಕೆ  

ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡು, ಹೆಣ್ಣುಗಳನ್ನೂ, ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡು, ಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.


ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.


ಆಗ ಮೋಶೆಯು ಈ ಮಾತನ್ನು ಕೇಳಿದಾಗ ತೃಪ್ತಿಪಟ್ಟನು.


“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ:


“ ‘ಆದ್ದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ, ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಇಲ್ಲವೆ ಪಕ್ಷಿಗಳಿಂದಲೂ ಇಲ್ಲವೆ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮ ಪ್ರಾಣಗಳನ್ನು ಅಶುದ್ಧಮಾಡಿಕೊಳ್ಳಬಾರದು.


ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.


ಯೆಹೋವ ದೇವರು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ನೀವು ತಿನ್ನಬಹುದಾದ ಪ್ರಾಣಿಗಳು ಯಾವವಂದರೆ: ಎತ್ತು, ಕುರಿ, ಮೇಕೆ,


ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು