Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:2 - ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀವು ಇಸ್ರಯೇಲರಿಗೆ ತಿಳಿಸಬೇಕಾದ ವಿಷಯಗಳು ಇವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಇಸ್ರಾಯೇಲ್ಯರಿಗೆ ಹೀಗೆ ಹೇಳಬೇಕು- ಭೂವಿುಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೇಳಬೇಕಾದದ್ದೇನೆಂದರೆ, ನೀವು ಈ ಪಶುಗಳನ್ನು ತಿನ್ನಬಹುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:2
22 ತಿಳಿವುಗಳ ಹೋಲಿಕೆ  

ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.


ಅವು ನಿಮಗೆ ಅಶುದ್ಧವಾಗಿಯೇ ಇರುವವು. ನೀವು ಅವುಗಳ ಮಾಂಸವನ್ನು ತಿನ್ನಬಾರದು ಮತ್ತು ಅವುಗಳ ಶವಗಳು ನಿಮಗೆ ಹೇಯವಾಗಿರಬೇಕು.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


“ ‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.


ಅದರಲ್ಲಿರುವ ಆಹಾರ ಪದಾರ್ಥವೆಲ್ಲಾ ನೀರಿನಿಂದ ನೆನೆದಿದ್ದರೆ ಅದು ಅಶುದ್ಧವಾಗಿರುವುದು. ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವುದು.


“ ‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ,


ಆದರೂ ಹಾರಾಡುವ, ಹರಿದಾಡುವ ನಾಲ್ಕು ಕಾಲುಗಳ ಮೇಲೆ ಹೋಗುವ, ತಮ್ಮ ಪಾದಗಳ ಮೇಲೆ ಕಾಲುಗಳಿದ್ದು, ಭೂಮಿಯ ಮೇಲೆ ದುಮುಕುವವುಗಳನ್ನೂ ನೀವು ತಿನ್ನಬಹುದು.


“ ‘ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವಾಗಿವೆ. ಇವುಗಳು ನಿಮಗೆ ಅಸಹ್ಯಕರವಾದ ಮತ್ತು ತಿನ್ನಲು ನಿಷೇಧಿಸಲಾದ ಪಕ್ಷಿಗಳು ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ರಣಹದ್ದು, ಕಪ್ಪು ರಣಹದ್ದು.


“ ‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.


“ ‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ.


ಯೆಹೋವ ದೇವರು ಮೋಶೆ ಆರೋನರಿಗೆ ಹೀಗೆ ಹೇಳಿದರು,


ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು