Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:27 - ಕನ್ನಡ ಸಮಕಾಲಿಕ ಅನುವಾದ

27 ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವುವುಗಳೆಲ್ಲಾ ನಿಮಗೆ ಅಶುದ್ಧವಾಗಿರುವುವು. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣ ಯಾವನಿಗೆ ಸೋಂಕುವದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:27
10 ತಿಳಿವುಗಳ ಹೋಲಿಕೆ  

ಆದರೆ ನಾಲ್ಕು ಪಾದವಿರುವ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳು ನಿಮಗೆ ಹೇಯವಾಗಿರಬೇಕು.


“ ‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.


“ ‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು.


ಅವುಗಳ ಶವವನ್ನು ಹೊರುವವರು ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಈ ಪ್ರಾಣಿಗಳು ನಿಮಗೆ ಅಶುದ್ಧವಾದವುಗಳು.


“ಆ ಮನೆಯು ಮುಚ್ಚಿರುವ ಕಾಲದಲ್ಲೆಲ್ಲಾ ಅದರೊಳಗೆ ಯಾವನಾದರೂ ಹೋದರೆ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರುವನು.


ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.


“ಬಲಿಪಶುವಿಗಾಗಿ ಹೋತವನ್ನು ಹೋಗಲು ಬಿಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.


“ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.


ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು.


ಆಗ ಯಾಜಕನು ತನ್ನ ವಸ್ತ್ರಗಳನ್ನು ತೊಳೆದುಕೊಂಡು, ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಗೆ ಬರಬಹುದು. ಆದರೂ ಯಾಜಕನು ಸಂಜೆಯವರೆಗೂ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು