Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:3 - ಕನ್ನಡ ಸಮಕಾಲಿಕ ಅನುವಾದ

3 ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಭೂಮಿಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಈ ಕೆಳಕಂಡವುಗಳ ಮಾಂಸವನ್ನು ನೀವು ತಿನ್ನಬಹುದು: ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವವಂದರೆ - ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕಾಲ್ಗೊರಸು ಸೀಳಿರುವ ಮತ್ತು ಮೆಲಕು ಹಾಕುವ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:3
17 ತಿಳಿವುಗಳ ಹೋಲಿಕೆ  

ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.


ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು.


“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ:


“ ‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ.


ಬೆಟ್ಟದ ಕುಣಿ ಮೊಲವು ಮೇವನ್ನು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.


ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.


ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.


“ ‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು.


ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು.


ಹಂದಿಯನ್ನು ತಿನ್ನಬಾರದು. ಏಕೆಂದರೆ ಅದು ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲ. ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ನೀವು ತಿನ್ನಬಾರದು, ಅವುಗಳ ಹೆಣವನ್ನು ಮುಟ್ಟಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು