ಯಾಜಕಕಾಂಡ 11:32 - ಕನ್ನಡ ಸಮಕಾಲಿಕ ಅನುವಾದ32 ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವದೋ ಆ ವಸ್ತುವು ಅಶುದ್ಧವಾಗಿರುವದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವದು; ತರುವಾಯ ಶುದ್ಧಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವುದೇ ವಸ್ತುವಿನ ಮೇಲೆ ಬಿದ್ದರೆ, ಆಗ ಆ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಶೋಕಬಟ್ಟೆಯಾಗಲಿ ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು. ಅಧ್ಯಾಯವನ್ನು ನೋಡಿ |