ಯಾಜಕಕಾಂಡ 11:35 - ಕನ್ನಡ ಸಮಕಾಲಿಕ ಅನುವಾದ35 ಅವುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಅದು ಅಶುದ್ಧವಾಗಿರುವುದು. ಅದು ಹರಿವಾಣವಾಗಿದ್ದರೂ, ಮಣ್ಣುಗಳ ಒಲೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಏಕೆಂದರೆ ಅವು ಅಶುದ್ಧವಾಗಿವೆ. ಅವು ನಿಮಗೆ ಅಶುದ್ಧವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆ ಜಂತುಗಳ ಹೆಣ ಯಾವ ವಸ್ತುಗಳ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು. ಅದು ಅಶುದ್ಧವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವದು. ಒಲೆಗಳಲ್ಲಿ ಅದು ಒಂಟೊಲೆಯಾಗಿದ್ದರೂ ಜೋಡೊಲೆಯಾಗಿದ್ದರೂ ಅದು ಅಶುದ್ಧವಾದದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಸತ್ತ ಪ್ರಾಣಿಯ ಯಾವುದೇ ಭಾಗ ಯಾವುದೇ ವಸ್ತುವಿನ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗಿದೆ. ಅದು ಮಣ್ಣಿನ ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಆ ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅವು ನಿಮಗೆ ಯಾವಾಗಲೂ ಅಶುದ್ಧವಾಗಿರುವವು. ಅಧ್ಯಾಯವನ್ನು ನೋಡಿ |