ಯಾಜಕಕಾಂಡ 11:45 - ಕನ್ನಡ ಸಮಕಾಲಿಕ ಅನುವಾದ45 ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ನಿಮ್ಮ ದೇವರಾಗಿರುವದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನೇ ನಾನು; ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.” ಅಧ್ಯಾಯವನ್ನು ನೋಡಿ |