Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:47 - ಕನ್ನಡ ಸಮಕಾಲಿಕ ಅನುವಾದ

47 ಅಶುದ್ಧ ಮತ್ತು ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನಲರ್ಹವಾದ ಮೃಗ ಮತ್ತು ತಿನ್ನಬಾರದ ಮೃಗಗಳ ನಡುವಿನ ವ್ಯತ್ಯಾಸವನ್ನು ಹೀಗೆ ತಿಳಿದುಕೊಳ್ಳುವಿರಿ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಇದರಿಂದ ಶುದ್ಧಾಶುದ್ಧಗಳನ್ನೂ, ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಇದರಿಂದ ಶುದ್ಧಾಶುದ್ಧಗಳನ್ನೂ ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವದಕ್ಕೆ ನಿಮ್ಮಿಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅಶುದ್ಧವಾದ ಮತ್ತು ಶುದ್ಧವಾದ ಪ್ರಾಣಿಗಳ ಕುರಿತು ತಿಳಿದುಕೊಳ್ಳಲು ನಿಮಗೆ ಈ ನಿಯಮಗಳು ಸಹಾಯಕವಾಗಿವೆ. ಜನರು ಯಾವ ಪ್ರಾಣಿಗಳ ಮಾಂಸವನ್ನು ತಿನ್ನಬಹುದು ಮತ್ತು ಯಾವುದನ್ನು ತಿನ್ನಬಾರದೆಂದು ಈ ನಿಯಮಗಳು ತಿಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:47
10 ತಿಳಿವುಗಳ ಹೋಲಿಕೆ  

ನೀವು ಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಮಧ್ಯೆ ಇರುವ ವ್ಯತ್ಯಾಸವನ್ನು ತೋರಿಸುವುದಕ್ಕಾಗಿಯೂ


ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧಾಶುದ್ಧ ವ್ಯತ್ಯಾಸವನ್ನೂ ವಿವರಿಸಬೇಕು.


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


“ ‘ಪ್ರಾಣಿಗಳು, ಪಕ್ಷಿಗಳು, ನೀರಿನಲ್ಲಿರುವ ಮತ್ತು ನೆಲದ ಮೇಲೆ ತೆವಳುವ ಪ್ರತಿಯೊಂದು ಜೀವಿಗಳಿಗೆ ಕುರಿತಾದ ನಿಯಮವು ಇದೇ.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಹೇಳಿದ್ದೇನೆಂದರೆ,


ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.


ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡು, ಹೆಣ್ಣುಗಳನ್ನೂ, ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡು, ಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು