Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:4 - ಕನ್ನಡ ಸಮಕಾಲಿಕ ಅನುವಾದ

4 ಅವಳು ಮೂವತ್ತಮೂರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು. ಅವಳ ಶುದ್ಧೀಕರಣದ ದಿನಗಳು ಪೂರೈಸುವ ತನಕ ಅವಳು ಪರಿಶುದ್ಧವಾದದ್ದನ್ನು ಮುಟ್ಟಬಾರದು, ಇಲ್ಲವೆ ಪರಿಶುದ್ಧ ಸ್ಥಳಕ್ಕೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಮೇಲೆ ಆಕೆ ಪೂರ್ಣಶುದ್ಧಳಾಗಲು ಮೂವತ್ತುಮೂರು ದಿನಗಳವರೆಗೆ ಕಾದಿರಬೇಕು. ಅದು ಮುಗಿಯುವ ತನಕ ಆಕೆ ದೇವರ ವಸ್ತುಗಳನ್ನು ಮುಟ್ಟಕೂಡದು, ದೇವಸ್ಥಾನಕ್ಕೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಮೇಲೆ ಅವಳ ಶುದ್ಧೀಕರಣ ಪೂರ್ತಿಗೆ ಇನ್ನೂ ಮೂವತ್ತು ಮೂರು ದಿವಸ ಹಿಡಿಯುವದು. ಅದು ಪೂರೈಸುವ ತನಕ ಅವಳು ದೇವರ ವಸ್ತುವನ್ನು ಮುಟ್ಟಕೂಡದು, ದೇವಸ್ಥಾನಕ್ಕೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:4
5 ತಿಳಿವುಗಳ ಹೋಲಿಕೆ  

ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.


ಎಂಟನೆಯ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸಬೇಕು.


ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು