Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:6 - ಕನ್ನಡ ಸಮಕಾಲಿಕ ಅನುವಾದ

6 “ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗಂಡುಮಗುವನ್ನು ಹೆತ್ತರೂ ಹೆಣ್ಣು ಮಗುವನ್ನು ಹೆತ್ತರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರುಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:6
15 ತಿಳಿವುಗಳ ಹೋಲಿಕೆ  

ಮೋಶೆಯ ನಿಯಮದ ಪ್ರಕಾರ ಮರಿಯಳಿಗೆ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ, ಯೋಸೇಫನು ಮತ್ತು ಮರಿಯಳು ಶಿಶುವನ್ನು ಕರ್ತದೇವರಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತಂದರು.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು, ದೇವದರ್ಶನದ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರಬೇಕು.


ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.


ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.


ಮತ್ತು ಅವನಿಂದಾಗುವಷ್ಟು ಎರಡು ಬೆಳವಕ್ಕಿಗಳನ್ನೂ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನೂ ತೆಗೆದುಕೊಳ್ಳಬೇಕು. ಅವುಗಳಲ್ಲಿ ಒಂದು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದು ದಹನಬಲಿಗಾಗಿಯೂ ಇರುವುದು.


“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.


ಅದಕ್ಕೆ ಯೆಹೋವ ದೇವರು ಅಬ್ರಾಮನಿಗೆ, “ಮೂರು ವರ್ಷದ ಕಡಸನ್ನು, ಮೂರು ವರ್ಷದ ಮೇಕೆಯನ್ನು, ಮೂರು ವರ್ಷದ ಟಗರನ್ನು, ಒಂದು ಬೆಳವಕ್ಕಿಯನ್ನು, ಒಂದು ಪಾರಿವಾಳವನ್ನು ನನಗಾಗಿ ತೆಗೆದುಕೊಂಡು ಬಾ,” ಎಂದರು.


ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು.


ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು