Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:7 - ಕನ್ನಡ ಸಮಕಾಲಿಕ ಅನುವಾದ

7 ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾಜಕನು ಅವುಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳ ಪರವಾಗಿ ದೋಷಪರಿಹಾರ ಮಾಡಿದಾಗ ಅವಳಿಗೆ ರಕ್ತಸ್ರಾವದಿಂದ ಆದ ಅಪರಿಶುದ್ಧತೆ ನಿವಾರಣೆಯಾಗಿ ಶುದ್ಧಳಾಗುವಳು. ಗಂಡು ಮಗು ಹೆತ್ತಾಗಲು, ಹೆಣ್ಣು ಮಗು ಹೆತ್ತಾಗಲು ಅನುಸರಿಸಬೇಕಾದ ವಿಧಿ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಪರಿಶುದ್ಧತೆ ನಿವೃತ್ತಿಯಾಗಿ ಶುದ್ಧಳಾಗುವಳು. ಗಂಡುಮಗುವನ್ನಾಗಲಿ ಹೆಣ್ಣುಮಗುವನ್ನಾಗಲಿ ಹೆತ್ತವಳಿಗೆ ಇದೇ ವಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7-8 ಆಕೆಯು ಕುರಿಮರಿಯನ್ನು ತರಲು ಶಕ್ತಳಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರಬಹುದು. ಅವುಗಳಲ್ಲಿ ಒಂದನ್ನು ಸರ್ವಾಂಗಹೋಮಕ್ಕಾಗಿಯೂ ಇನ್ನೊಂದನ್ನು ಪಾಪಪರಿಹಾರಕ ಯಜ್ಞಕ್ಕಾಗಿಯೂ ತರಬೇಕು. ಯಾಜಕನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಅರ್ಪಿಸಬೇಕು. ಹೀಗೆ ಯಾಜಕನು ಆಕೆಯನ್ನು ಶುದ್ಧಿಗೊಳಿಸುವನು. ಆಗ ಆಕೆಯು ರಕ್ತಸ್ರಾವದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗೆ ಅಥವಾ ಹೆಣ್ಣುಮಗುವಿಗೆ ಜನ್ಮವಿತ್ತ ಸ್ತ್ರೀಯು ಅನುಸರಿಸಬೇಕಾದ ನಿಯಮಗಳು ಇವುಗಳೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:7
16 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.


ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.


ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು? ಯಾರೂ ತರಲಾರರು!


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.


“ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.


ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”


ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು