ಯಾಜಕಕಾಂಡ 13:4 - ಕನ್ನಡ ಸಮಕಾಲಿಕ ಅನುವಾದ4 ಅವನ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು, ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದು, ಅಲ್ಲಿನ ಕೂದಲು ಬೆಳ್ಳಗಾಗದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಕೆಲವು ಬಾರಿ ಒಬ್ಬ ವ್ಯಕ್ತಿಯ ಚರ್ಮದ ಮೇಲೆ ಬಿಳಿ ಮಚ್ಚೆ ಇರುತ್ತದೆ. ಆದರೆ ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿರದಿದ್ದರೆ ಮತ್ತು ಅದರ ರೋಮ ಬೆಳ್ಳಗಾಗಿಲ್ಲದಿದ್ದರೆ ಯಾಜಕನು ಅವನನ್ನು ಬೇರೆ ಜನರಿಂದ ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿ |