Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:51 - ಕನ್ನಡ ಸಮಕಾಲಿಕ ಅನುವಾದ

51 ಅವನು ಏಳನೆಯ ದಿನದಲ್ಲಿ ಅದನ್ನು ಪರೀಕ್ಷಿಸಬೇಕು. ಆ ಬೂಜು ಅವನ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹೆಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಹರಡಿದ್ದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದು ಅಶುದ್ಧವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಏಳನೆಯ ದಿನದಲ್ಲಿ ಅವನು ಅದನ್ನು ನೋಡುವಾಗ ಆ ಬಟ್ಟೆಯ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ಇಲ್ಲವೇ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ; ಆ ವಸ್ತು ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಏಳನೆಯ ದಿನದಲ್ಲಿ ಅವನು ಅದನ್ನು ನೋಡುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಯಾವದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ; ಆ ವಸ್ತು ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51-52 ಏಳನೆಯ ದಿನದಲ್ಲಿ ಯಾಜಕನು ಬೂಷ್ಟನ್ನು ಪರೀಕ್ಷಿಸಬೇಕು. ಅದು ಚರ್ಮದ ಮೇಲಾಗಲಿ ಬಟ್ಟೆಯ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಇದ್ದರೆ ಅದನ್ನು ಪರೀಕ್ಷಿಸಬೇಕು. ಬೂಷ್ಟು ಹರಡಿದ್ದರೆ, ಆ ಬಟ್ಟೆ ಅಥವಾ ತೊಗಲು ಅಶುದ್ಧವಾಗಿದೆ. ಯಾಜಕನು ಅದನ್ನು ಸುಟ್ಟುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:51
5 ತಿಳಿವುಗಳ ಹೋಲಿಕೆ  

ಯಾಜಕನು ಬಂದು ಪರೀಕ್ಷಿಸಬೇಕು. ಆಗ ಬೂಜು ಮನೆಯಲ್ಲಿ ಹರಡಿಕೊಂಡಿದ್ದರೆ, ಆ ಮನೆಯಲ್ಲಿ ಅದೊಂದು ನಾಶಕರವಾದ ಬೂಜು ಆಗಿರುವುದು, ಆ ಮನೆ ಅಶುದ್ಧವಾದದ್ದು.


ನಾರಿನ ಇಲ್ಲವೆ ಉಣ್ಣೆಯ ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ಚರ್ಮದಲ್ಲಾಗಲಿ, ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಇದಲ್ಲದೆ ಹಸುರಾಗಿ ಇಲ್ಲವೆ,


ಯಾಜಕನು ಅದನ್ನು ಪರೀಕ್ಷಿಸಿ, ಆ ವಸ್ತುವನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.


ಆದ್ದರಿಂದ ಅವನು ಆ ಉಡುಪುಗಳನ್ನು ಅಂದರೆ ಅದು ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಎಲ್ಲಿ ಬೂಜಿದೆಯೋ ಅದನ್ನು ಸುಡಬೇಕು. ಏಕೆಂದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದನ್ನು ಬೆಂಕಿಯಿಂದ ಸುಡಬೇಕು.


ಏಳನೆಯ ದಿನದಲ್ಲಿ ಯಾಜಕನು ತಿರುಗಿಬಂದು ಪರೀಕ್ಷಿಸಿದಾಗ, ಆ ಬೂಜು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು