Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:55 - ಕನ್ನಡ ಸಮಕಾಲಿಕ ಅನುವಾದ

55 ಅದನ್ನು ತೊಳೆದಾದ ಮೇಲೆ ಯಾಜಕನು ಆ ಬೂಜನ್ನು ಪರೀಕ್ಷಿಸಬೇಕು. ಆ ಬೂಜು ಬಣ್ಣವನ್ನು ಬದಲಾಯಿಸದಿದ್ದರೆ ಮತ್ತು ಹರಡದಿದ್ದರೆ ಅದು ಅಶುದ್ಧವಾಗಿರುವುದು. ಅದನ್ನು ನೀನು ಬೆಂಕಿಯಿಂದ ಸುಡಬೇಕು. ಅದು ಒಳಗಿನಿಂದಾಗಲಿ ಇಲ್ಲವೆ ಹೊರಗಿನಿಂದಾಗಲಿ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಆ ಮಚ್ಚೆ ಇದ್ದ ವಸ್ತುವನ್ನು ತೊಳೆಸಿದ ಮೇಲೆ ಯಾಜಕನು ನೋಡುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲಿನ ಕಡೆಯಿಂದಾಗಲಿ ಕೆಳಗಿನ ಕಡೆಯಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಆ ಮಚ್ಚೆ ಇದ್ದ ವಸ್ತುವನ್ನು ತೊಳೆಸಿದ ಮೇಲೆ ಯಾಜಕನು ನೋಡುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲಣ ಕಡೆಯಿಂದಾಗಲಿ ಕೆಳಗಣ ಕಡೆಯಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆ ಬಳಿಕ ಯಾಜಕನು ಅದನ್ನು ತಿರುಗಿ ಪರೀಕ್ಷಿಸಬೇಕು. ಬೂಷ್ಟು ಇನ್ನೂ ಹಾಗೆಯೇ ಇರುವಂತೆ ಕಂಡರೆ, ಆಗ ಆ ವಸ್ತು ಅಶುದ್ಧವಾಗಿದೆ. ಅದು ಹರಡಲಿಲ್ಲವಾದರೂ ನೀವು ಬಟ್ಟೆಯನ್ನು ಅಥವಾ ತೊಗಲನ್ನು ಸುಟ್ಟುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:55
6 ತಿಳಿವುಗಳ ಹೋಲಿಕೆ  

ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ.


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ಆಗ ಯಾಜಕನು ಆ ಬೂಜುಳ್ಳ ವಸ್ತುವನ್ನು ತೊಳೆಯುವಂತೆ ಆಜ್ಞಾಪಿಸಿ, ಅದನ್ನು ಅವನು ಏಳು ದಿನಗಳ ಕಾಲ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು.


ಯಾಜಕನು ಅದನ್ನು ಪರೀಕ್ಷಿಸಿದರೆ, ಆ ಬೂಜು ಹಿಡಿದ ವಸ್ತುವನ್ನು ತೊಳೆದ ನಂತರ ಮಬ್ಬಾಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ, ಚರ್ಮದಿಂದಾಗಲಿ, ಹಾಸಿನಿಂದಾಗಲಿ, ಹೊಕ್ಕಿನಿಂದಾಗಲಿ ಹರಿದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು