Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:59 - ಕನ್ನಡ ಸಮಕಾಲಿಕ ಅನುವಾದ

59 ಉಣ್ಣೆ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಬೂಜು ಹಿಡಿದಿದ್ದರೆ ಪಾಲಿಸತಕ್ಕ ನಿಯಮಗಳಿವು. ಅದನ್ನು ಶುದ್ಧವೆಂದು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 “ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಉಣ್ಣೇಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬದು ಇದರಿಂದ ತಿಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಚರ್ಮದ ವಸ್ತುಗಳ ಮೇಲಾಗಲಿ ಬಟ್ಟೆಯ ಮೇಲಾಗಲಿ (ಅದು ಉಣ್ಣೆಯದ್ದಾಗಿರಲಿ ನಾರಿನದ್ದಾಗಿರಲಿ ನೇಯ್ದದ್ದಾಗಿರಲಿ ಅಥವಾ ಹೆಣೆದದ್ದಾಗಿರಲಿ) ಕಂಡು ಬರುವ ಬೂಷ್ಟಿನ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು ಇವೇ. ಶುದ್ಧವಾದವುಗಳೋ ಅಶುದ್ಧವಾದವುಗಳೋ ಎಂದು ನಿರ್ಧಾರ ಮಾಡಲು ಇದೇ ನಿಯಮಗಳನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:59
12 ತಿಳಿವುಗಳ ಹೋಲಿಕೆ  

“ಬೂಜು ಚರ್ಮರೋಗದ ಗುರುತು ಅವನ ಉಡುಪಿನಲ್ಲೂ ಇದ್ದು, ಅದು ಉಣ್ಣೆಯ ಉಡುಪಾಗಲಿ ಇಲ್ಲವೆ ನಾರಿನ ಉಡುಪಾಗಲಿ,


ನಾರಿನ ಇಲ್ಲವೆ ಉಣ್ಣೆಯ ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ಚರ್ಮದಲ್ಲಾಗಲಿ, ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಇದಲ್ಲದೆ ಹಸುರಾಗಿ ಇಲ್ಲವೆ,


ನೀನು ತೊಳೆದ ಮೇಲೆ ಆ ಬೂಜು ಯಾವ ವಸ್ತುವಿನಿಂದ ಹೊರಟು ಹೋಯಿತೋ, ಆ ಬಟ್ಟೆಯನ್ನೂ, ಹಾಸನ್ನೂ, ಹೊಕ್ಕನ್ನೂ ಇಲ್ಲವೆ ಚರ್ಮದ ಯಾವುದೇ ಸಾಮಗ್ರಿಗಳನ್ನೂ ಎರಡನೆಯ ಸಾರಿ ತೊಳೆಯಬೇಕು. ಆಗ ಅದು ಶುದ್ಧವಾಗಿರುವುದು.”


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ:


“ಚರ್ಮರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ. ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.


ಚರ್ಮರೋಗವುಳ್ಳವನು ಶುದ್ಧತೆ ಮಾಡಿಸಿಕೊಳ್ಳಲು ಗತಿಯಿಲ್ಲದವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.


ಅವುಗಳ ಶುದ್ಧಾಶುದ್ಧ ಬೇಧವನ್ನು ಬೋಧಿಸುವ ನಿಯಮಗಳು ಇವೇ. ಚರ್ಮರೋಗಗಳ ಹಾಗೂ ಬೂಜಿನ ವಿಷಯದಲ್ಲಿರುವ ನಿಯಮಗಳು ಇವೇ.


“ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ”


ಮೇಹಸ್ರಾವವುಳ್ಳವನಿಗೂ ವೀರ್ಯ ಸ್ರಾವವುಳ್ಳವನಿಗೂ ಅವುಗಳಿಂದ ಅಶುದ್ಧವಾಗುವವರೆಗೂ ಇರುವ ನಿಯಮವು ಇದೆ.


“ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,


ಗಂಡ ಹೆಂಡತಿಯರ ವಿಷಯದಲ್ಲಿಯೂ ತಂದೆಯ ಮನೆಯಲ್ಲಿ ಕನ್ಯಾವಸ್ಥೆಯಲ್ಲಿರುವ ಮಗಳ ವಿಷಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.


ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರಿಗೆ ಆಜ್ಞಾಪಿಸಿದ ಆಜ್ಞೆಗಳೂ, ನ್ಯಾಯಗಳೂ ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು