ಯಾಜಕಕಾಂಡ 14:12 - ಕನ್ನಡ ಸಮಕಾಲಿಕ ಅನುವಾದ12 “ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಂಡು ಪ್ರಾಯಶ್ಚಿತ್ತ ಬಲಿಯಾಗಿ ಅರ್ಪಿಸಿ, ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು. ಅಧ್ಯಾಯವನ್ನು ನೋಡಿ |