ಯಾಜಕಕಾಂಡ 14:19 - ಕನ್ನಡ ಸಮಕಾಲಿಕ ಅನುವಾದ19 “ಯಾಜಕನು ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು. ತರುವಾಯ ಅವನು ದಹನಬಲಿಯ ಪ್ರಾಣಿಯನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಲ್ಲದೆ, ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಬಲಿಯಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ದಹನಬಲಿಯಾಗಿ ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವದಕ್ಕೆ [ಆ ಕುರಿಯನ್ನು] ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು [ಆ ಎರಡನೆಯ ಟಗರು ಮರಿಯನ್ನು] ಸರ್ವಾಂಗಹೋಮಕ್ಕಾಗಿ ವಧಿಸಬೇಕು. ಅವನು ಆ ಸರ್ವಾಂಗಹೋಮವನ್ನೂ ನೈವೇದ್ಯವನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕ ಯಜ್ಞಮಾಡುವುದರ ಮೂಲಕ ಆ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು. ಅಧ್ಯಾಯವನ್ನು ನೋಡಿ |