Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:54 - ಕನ್ನಡ ಸಮಕಾಲಿಕ ಅನುವಾದ

54 ಎಲ್ಲಾ ವಿಧವಾದ ಚರ್ಮರೋಗಕ್ಕೂ, ಇಸಬಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 “ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ನಾನಾ ವಿಧವಾದ ಕುಷ್ಠರೋಗದ ಗುರುತುಗಳು, ಅಂದರೆ ಕೂದಲು ಬೆಳೆಯದ ಇಸಬು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ ಕೂದಲು ಬೆಳೆಯದ ದದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ ಕೂದಲು ಬೆಳೆಯಲಾಗದ ದದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:54
16 ತಿಳಿವುಗಳ ಹೋಲಿಕೆ  

ಮೇಹಸ್ರಾವವುಳ್ಳವನಿಗೂ ವೀರ್ಯ ಸ್ರಾವವುಳ್ಳವನಿಗೂ ಅವುಗಳಿಂದ ಅಶುದ್ಧವಾಗುವವರೆಗೂ ಇರುವ ನಿಯಮವು ಇದೆ.


ಚರ್ಮರೋಗವುಳ್ಳವನು ಶುದ್ಧತೆ ಮಾಡಿಸಿಕೊಳ್ಳಲು ಗತಿಯಿಲ್ಲದವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.


ಕುಷ್ಠರೋಗಿಗಳ ವಿಷಯದಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವುದನ್ನೆಲ್ಲಾ ನೀವು ಜಾಗ್ರತೆಯಿಂದ ಕಾಪಾಡಿ ಕೈಗೊಳ್ಳುವ ಹಾಗೆ ನೋಡಿಕೊಳ್ಳಿ. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನು ನೀವು ಕಾಪಾಡಿ ಕೈಗೊಳ್ಳಬೇಕು.


“ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು.


“ ‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು.


“ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,


“ಚರ್ಮರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ. ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.


“ ‘ಪ್ರಾಣಿಗಳು, ಪಕ್ಷಿಗಳು, ನೀರಿನಲ್ಲಿರುವ ಮತ್ತು ನೆಲದ ಮೇಲೆ ತೆವಳುವ ಪ್ರತಿಯೊಂದು ಜೀವಿಗಳಿಗೆ ಕುರಿತಾದ ನಿಯಮವು ಇದೇ.


ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ.


“ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.


“ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.


“ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.


“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.


ಆದರೆ ಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲಗಳಲ್ಲಿ ಬಿಟ್ಟುಬಿಡಬೇಕು. ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅದು ಶುದ್ಧವಾಗುವುದು.”


ಯಾಜಕನು ಚರ್ಮದ ಮೇಲಿರುವ ವ್ಯಾಧಿಯನ್ನು ಪರೀಕ್ಷಿಸಬೇಕು. ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ, ಆ ವ್ಯಾಧಿಯು ಅವನ ಚರ್ಮಕ್ಕಿಂತಲೂ ಆಳವಾಗಿ ಕಂಡರೆ, ಅದು ಚರ್ಮರೋಗವಾಗಿರುವುದು. ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು