ಯಾಜಕಕಾಂಡ 14:6 - ಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒರತೆ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮತ್ತೊಂದು ಪಕ್ಷಿಯನ್ನೂ ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಸೆಲೇ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನೂ ಸಜೀವವಾಗಿಯೇ ಅದ್ದಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರು ಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು. ಅಧ್ಯಾಯವನ್ನು ನೋಡಿ |