ಯಾಜಕಕಾಂಡ 14:8 - ಕನ್ನಡ ಸಮಕಾಲಿಕ ಅನುವಾದ8 “ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು. ಅಧ್ಯಾಯವನ್ನು ನೋಡಿ |